(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿರುವ ಕುರಿತು ವರದಿಯಾಗಿದೆ.
ವಾಹನ ತಪಾಸಣಾ ನಿರತ ಪೊಲೀಸರು ಸೋಮವಾರದಂದು ರಾತ್ರಿ ತಲಪಾಡಿ ಕಡೆಯಿಂದ ಬರುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಚಾಲಕರನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ವಳಚ್ಚಿಲ್ ಎಂಬಲ್ಲಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಮರಳು ಸಹಿತ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.