ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಮತ್ತು ಬ್ಯಾಕ್‍ ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು.

ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ- ಅರ್ಧ ತೋಳಿನ ಶರ್ಟ್ ಕಡ್ಡಾಯವಾಗಿ ಧರಿಸುವುದು, ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು ದೊಡ್ಡ ಬಟನ್ ಇರುವ ಶರ್ಟ್ ನಿಷೇಧ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟುಗಳನ್ನು ಧರಿಸುವಂತಿಲ್ಲ. ಪರೀಕ್ಷೆ ಕೇಂದ್ರದೊಳಗೆ ಶೂ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.

Also Read  ಸುಬ್ರಹ್ಮಣ್ಯ ದೇಗುಲದ ಆಸ್ತಿಯ ರಕ್ಷಣೆ ಮಾಡುವಂತೆ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಮನವಿ

ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ- ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ ಗಳು, ಅಥವಾ ಬಟನ್‍ಗಳು ಹೊಂದಿರುವ ಬಟ್ಟೆ ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಜೀನ್ಸ್ ಪ್ಯಾಂಟ್‍ ಗಳನ್ನು ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ ಮತ್ತು ದಪ್ಪವಾದ ಅಡಿಭಾಗ ಹೊಂದಿರುವ ಪಾದರಕ್ಷೆ ನಿಷೇಧಿಸಲಾಗಿದೆ. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸಬೇಕು. ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಲಂಕಾರು: ಕೋಟಿ ಚೆನ್ನಯ ಮಿತ್ರವೃಂದದ ದಶಮಾನೋತ್ಸವ ಸಮಿತಿ ರಚನೆ

error: Content is protected !!
Scroll to Top