ಹೃದಯಾಘಾತ- ಭೂಮಾಪಕ ಮೃತ್ಯು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ.







ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕರೆತಂದ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top