ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ – ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. 2022ರ  ಏಪ್ರಿಲ್ 14ರಂದು ಅಂದಿನ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಪ್ರತಿಭಟನೆ ನಡೆಸುವ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಸಿಎಂ ಸಿದ್ದರಾಮಯ್ಯ ರವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಇದನ್ನು ಪ್ರಶ್ನಿಸಿ ಸಿಎಂ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಆರೋಪ ಎದುರಿಸಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಅದರ ನೇತೃತ್ವವನ್ನು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ವಹಿಸಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಕೆ.ಎಸ್.‌ ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ಹೀಗಾಗಿ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಮಾಡಿತ್ತು. ಈ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದೆ ಎಂದು ಆರೋಪದಡಿ ನಗರದ ಹೈ ಗ್ರೌಂಡ್ಸ್‌ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಬಗ್ಗೆ, ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Also Read  ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ

error: Content is protected !!
Scroll to Top