(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420. ಪೊಲೀಸ್ ನಿರೀಕ್ಷಕರ ಕಚೇರಿ:0824-2427237 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.