ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌ ಯೋಜನೆಗಳು ಮಾಹಿತಿ ಹಕ್ಕು ಕಾಯಿದೆಯ ಹಾಗೂ ವಿಧಿ 19(1)(ಎ) ಇದರ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಚುನಾವಣಾ ಬಾಂಡ್‌ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಇಂದು ಈ ಮಹತ್ವದ ತೀರ್ಪು ನೀಡಿದೆ.

Also Read  ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ - ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

error: Content is protected !!