ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಇಲ್ಲಿನ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿರುವಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು. ಇದೀಗ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Also Read  ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

error: Content is protected !!
Scroll to Top