ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದ್ದು, ಇದರಿಂದ ತೆರವಾಗಿರುವ ಸ್ಥಾನಕ್ಕೆ ಕಲಬುರ್ಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಲ್ಲಿಕಾರ್ಜುನ ರಾಮಚಂದ್ರಪ್ಪ ಬುಧವಾರದಂದು ಆದೇಶ ಹೊರಡಿಸಿದ್ದಾರೆ.

Also Read  ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍

error: Content is protected !!
Scroll to Top