ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರವಾಸ ಮಾಡಿದ್ದ ಮಾದರಿಯಲ್ಲೇ ಇದೇ ಫೆ. 23ರ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

 

ಕಳೆದಬಾರಿ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16, ಶಿವಕುಮಾರ್ 15 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Also Read   ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.!

error: Content is protected !!
Scroll to Top