ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

Scroll to Top