ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಮಾ. 31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಕ್ಕೆ ಅವಕಾಶ ನೀಡಲಾಗುವುದು ಎಂದರು.

Also Read  ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

error: Content is protected !!
Scroll to Top