(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು 128 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಆತನನ್ನು ವಿಚಾರಿಸಿ, ತಪಾಸಣೆಗೆ ಒಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ನ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.