‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದರು. ವಿಷಯವನ್ನು ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದಿದ್ದು,  ಈ ವೇಳೆ ದಂಪತಿಯ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು.!

error: Content is protected !!
Scroll to Top