ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ

ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಮತ್ತಿತರರು ಭಾಗವಹಿಸಲಿದ್ದಾರೆ.

Also Read  ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

error: Content is protected !!
Scroll to Top