ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳ್ಳುತ್ತಿರುವ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯ ಸಭೆಯಲ್ಲಿ ಮಾತನಾಡಿದರು.

ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಉದ್ಯೋಗ ಮೇಳದ ಪ್ರಯೋಜನವನ್ನು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತಾಗಬೇಕು. ಇದಕ್ಕಾಗಿ ಎಲ್ಲಾ ಪದವಿ, ಡಿಪ್ಲೊಮಾ, ಐಟಿಐ ಕಾಲೇಜುಗಳ ಮುಖ್ಯಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾವಣಿಯನ್ನು ಮಾಡಿಸಬೇಕು ಎಂದರು. ವಿದ್ಯಾರ್ಥಿಗಳು ಹೇಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂಬುವುದರ ಮಾಹಿತಿ ವಿದ್ಯಾರ್ಥಿಗಳಿಗೆ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಬೇಕು, ಜಾಲಾತಾಣಗಳಲ್ಲಿ ವ್ಯಾಪಕ ಪ್ರಚಾರವನ್ನು ಕೈಗೊಂಡು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಮೂಲಕ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

Also Read  ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ

ಸಂಜೀವಿನಿ ಯೋಜನೆಯನ್ನು ಗ್ರಾಮೀಣ ಮಟ್ಟದ /ಸ್ಥಳೀಯ ಮಟ್ಟದ ವಸ್ತುಗಳ ಉತ್ವಾದನೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಆರಂಬಿಸಲಾಗಿದ್ದು, ಜನಸಾಮಾನ್ಯರಿಗೆ ಈ ಯೋಜನೆಯ ಬಗ್ಗೆ ಮಾಹಿತಿ ನೀಡಬೇಕು ಮತ್ತು ನಗರದ ಪಿಲಿಕುಳದವರೊಂದಿಗೆ ಕೈಜೋಡಿಸಬೇಕು ಹಾಗೂ ಅಲ್ಲಿ ತಯಾರಾಗುವ ವಸ್ತುಗಳನ್ನು ಖರೀದಿಸಿ ಹೆಚ್ಚಿನ ಮಟ್ಟದಲ್ಲಿ ಜನರಿಗೆ ಆ ವಸ್ತುಗಳು ತಲುಪುವಂತಾಗಬೇಕು ಎಂದರು. ಮಂಗಳೂರಿನಲ್ಲಿ ತಯಾರಾಗುವ ಉತ್ಪನ್ನಗಳು ಜನರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಹೇಳಿದರು. ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆಗಳ ಅನೇಕ ಯೋಜನೆಗಳ ಅನುಷ್ಟಾನದ ಬಗ್ಗೆ ಕಾರ್ಯವೈಖರಿಗಳ ಬಗ್ಗೆ ಚರ್ಚಿಸಲಾಯಿತು. ಪಿ.ಎಂ ಸ್ವನಿಧಿ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಪಾರಿಗಳಿಗೆ ಗುರುತಿನ ಚೀಟಿಯನ್ನು ನೀಡಲಾಗುತ್ತಿದ್ದು. ಸಾಮರ್ಥ್ಯ ಅಭಿವೃದ್ಧಿ ತರಬೇತಿಗಳಲ್ಲಿ ಬೀದಿ ಬದಿ ವ್ಯಪಾರಿಗಳಿಗೆ ಅಗತ್ಯ ಮಾಹಿತಿಯ ಜೊತೆಗೆ ಯಾವ ರೀತಿ ವ್ಯಾಪರ ಮಾಡಬೇಕು ಎಂದು ಮಾಹಿತಿ ನೀಡಬೇಕು. ಸ್ವ-ಸಹಾಯ ಸಂಘ, ಗ್ರಾಮೀಣ ಭಾಗದಲ್ಲಿ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆಗಳ ಮಾಹಿತಿ ವ್ಯಾಪಕವಾಗಿ ಒದಗಿಸುವಂತೆ ಸೂಚಿಸಿದರು.

Also Read  60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ

ಜಿಲ್ಲಾ ಕೌಶಲ್ಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಅವರು ಈಗಾಗಲೇ ಪಾಲಿಕೆಯ ತ್ಯಾಜ್ಯ ಸಂಗ್ರಹಿಸುವ ವಾಹನಗಳಲ್ಲಿ ಪ್ರಚಾರಪಡಿಸುವಂತೆ ತಿಳಿಸಲಾಗಿದೆ. ಕೈಗಾರಿಕಾ ಸಂಸ್ಥೆಗಳಿಗೂ ಕೂಡ ಮಾಹಿತಿಯನ್ನು ನೀಡಲಾಗಿದೆ, ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭಿಸಲಾಗಿದೆ ಸಭೆಯಲ್ಲಿ ಮಾಹಿತಿ ನೀಡಿದರು. ಉದ್ಯೋಗ ಮೇಳಕ್ಕೆ ಸಂಬಂಧಿಸಿದ ನೋಂದಣಿ ಅಥವಾ ವಿಚಾರಣೆಗಾಗಿ ಟೋಲ್ ಫ್ರೀ ಸಂಖ್ಯೆ 1800 599 9918 ಸಂಪರ್ಕಿಸಬಹುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪನಿರ್ದೇಶಕರು, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳ-2024 ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅನಾವರಣಗೊಳಿಸಿದರು.

error: Content is protected !!
Scroll to Top