ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ಕೈಗೊಳ್ಳುವ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ರಾಷ್ಟ್ರೀಕೃತ/ಷೆಡ್ಯೂಲ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು ಫೆ. 29 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಯೋಜನೆ:– ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ ರೂ.1,00,000 ಗಳ ಸಹಾಯಧನ ನೀಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಮೂಲಕ ಭರಿಸುವುದು.
ದಾಖಲಾತಿಗಳು- ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.6 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ಪಡಿತರ ಚೀಟಿ ಜೆರಾಕ್ಸ್ ಮತ್ತು ಆಧಾರ ಕಾರ್ಡ್ ಜೆರಾಕ್ಸ್, ಕೊಟೇಶನ್/ಯೋಜನಾ ವರದಿ ಮತ್ತು ಲೈಸನ್ಸ್, ಅರ್ಜಿದಾರರ ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಅನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು, ಅರ್ಜಿದಾರರು ಬ್ಯಾಂಕ್ ಪ್ರಭಂದಕರನ್ನು ಸಂಪರ್ಕಿಸಿ ಸಾಲ ನೀಡುವ ಬಗ್ಗೆ ಖಚಿತಪಡಿಸಬೇಕು. ನಿಗಮದ ವೆಬ್‍ಸ್ಶೆಟ್: kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’

error: Content is protected !!
Scroll to Top