15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದರು. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

Also Read  ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್

error: Content is protected !!
Scroll to Top