ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ.

ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್​ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರ ಮೃತದೇಹಗಳು ಆರ್​.ಆರ್​.ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Also Read  ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ - ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಘಟನಾ ಸ್ಥಳದಲ್ಲಿ ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಸಾವು, ಇಬ್ಬರ ಗುರುತು ಪತ್ತೆಯಾಗಿಲ್ಲ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರು ಗಾಯಾಳುಗಳ ಪೈಕಿ ಓರ್ವ 15 ವರ್ಷದ ಬಾಲಕನಿದ್ದಾನೆ. FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ ಎಂದಿದ್ದಾರೆ.

error: Content is protected !!
Scroll to Top