ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

error: Content is protected !!
Scroll to Top