9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ.

10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB ಸಂಗ್ರಹಣೆಯನ್ನು ಸಹ ನೀಡಲಾಗಿದೆ.

ಇನ್ಫಿನಿಕ್ಸ್ ಹಾಟ್ 40i ಸ್ಮಾರ್ಟ್​ಫೋನ್ ಭಾರತದಲ್ಲಿ ಸದ್ಯ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 8GB + 256GB ಸ್ಟೋರೇಜ್ ಮಾದರಿಗೆ 9,999 ರೂ. ನಿಗದಿ ಮಾಡಲಾಗಿದೆ. ಈ ಹ್ಯಾಂಡ್‌ಸೆಟ್ ಭಾರತದಲ್ಲಿ ಫೆಬ್ರವರಿ 21 ರಿಂದ ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಪಾಮ್ ಬ್ಲೂ, ಸ್ಟಾರ್‌ಫಾಲ್ ಗ್ರೀ ಎನ್, ಹರೈಸನ್ ಗೋಲ್ಡ್ ಮತ್ತು ಸ್ಟಾರ್‌ಲಿಟ್ ಕಪ್ಪು ಬಣ್ಣಗಳಲ್ಲಿ ಬರುತ್ತದೆ.

Also Read  SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇನ್ಫಿನಿಕ್ಸ್ ಹಾಟ್ 40i ಫೋನ್ 1612 x 720 ಪಿಕ್ಸೆಲ್‌ಗಳ ರೆಸಲ್ಯೂಶನ್, 480 nits ಬ್ರೈಟ್‌ನೆಸ್, 90Hz ರಿಫ್ರೆಶ್ ದರ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ದರದೊಂದಿಗೆ 6.6-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಮಾಲಿ G57 MP1 GPU ಜೊತೆಗೆ ಯುನಿಸಾಕ್ T606 ಪ್ರೊಸೆಸರ್ ಅಳವಡಿಸಲಾಗಿದೆ.

ಚಿಪ್‌ಸೆಟ್ ಅನ್ನು 8GB LPDDR4x RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ, ಇದನ್ನು ಮೈಕ್ರೊ SD ಕಾರ್ಡ್ ಮೂಲಕ ಮತ್ತಷ್ಟು ವಿಸ್ತರಿಸಬಹುದಾಗಿದೆ. 8GB ವರ್ಚುವಲ್ RAM ಬೆಂಬಲವಿದೆ. ಈ ಫೋನ್ ಆಂಡ್ರಾಯ್ಡ್ 13-ಆಧಾರಿತ XOS 13 ಕಸ್ಟಮ್ ಸ್ಕಿನ್‌ನಿಂದ ರನ್ ಆಗುತ್ತದೆ.

Also Read  ಬಿಸಿಲಿನ ಝಳ ಹಾಗೂ ನಿರ್ಜಲೀಕರಣದಿಂದ 13 ಮಂದಿ ಸಾವು..!   ➤ಇನ್ನು ಕೆಲವರು ಆಸ್ಪತ್ರೆಗೆ ದಾಖಲು!

ಚಿಪ್‌ಸೆಟ್ ಅನ್ನು 8GB LPDDR4x RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ, ಇದನ್ನು ಮೈಕ್ರೊ SD ಕಾರ್ಡ್ ಮೂಲಕ ಮತ್ತಷ್ಟು ವಿಸ್ತರಿಸಬಹುದಾಗಿದೆ. 8GB ವರ್ಚುವಲ್ RAM ಬೆಂಬಲವಿದೆ. ಈ ಫೋನ್ ಆಂಡ್ರಾಯ್ಡ್ 13-ಆಧಾರಿತ XOS 13 ಕಸ್ಟಮ್ ಸ್ಕಿನ್‌ನಿಂದ ರನ್ ಆಗುತ್ತದೆ.

error: Content is protected !!
Scroll to Top