ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದವರು, ಸಾಂಸ್ಕೃತಿಕ ನಾಯಕ ಎಂಬ ಬಿರುದನ್ನು ಹೊಂದಿರುವ ಅವರು ಅರ್ಹ ವ್ಯಕ್ತಿಯಾಗಿದ್ದಾರೆ. ಬಸವಣ್ಣನವರ ಚಿಂತನೆಯಲ್ಲಿ ತಪ್ಪು ಕಂಡು ಹಿಡಿಯಲು ಸಾಧ್ಯವಿಲ್ಲ, ಶೋಷಿತ ಸಮಾಜದ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಮ್ಮ ವಚನ ಸಾಹಿತ್ಯದ ಮೂಲಕ ಸರಳ ರೀತಿಯಲ್ಲಿ ಮನಮುಟ್ಟುವಂತೆ ವಿವರಿಸಿದ್ದಾರೆ. ದೇಶದಲ್ಲಿ ಕ್ರಾಂತಿಕಾರಿ ಸುಧಾರಣೆಯನ್ನು ತರುವಲ್ಲಿ ಬಸವಣ್ಣನವರಿಗೆ ಸರಿಸಾಟಿ ಯಾರು ಇಲ್ಲ. ಬಸವಣ್ಣನವರ ಚಿಂತನೆಗಳು ಪರಿಕಲ್ಪನೆಗಳು ಎಲ್ಲರಿಗೂ ಮಾದರಿ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಶಾಂತಿ ಸುವ್ಯವಸ್ಥೆಗಾಗಿ ನಾವೆಲ್ಲರೂ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. ವೈಚಾರಿಕ ಚಿಂತನೆಗಳು ಸಮಾಜದಲ್ಲಿ ಬೆಳೆಸುವುದು ಬಸವಣ್ಣನವರ ಮೂಲ ಆಶಯವಾಗಿತ್ತು. ಮನುಷ್ಯತ್ವವೇ ಅವರ ಮುಖ್ಯ ಧ್ಯೇಯ. ಅವರ ವಿಚಾರಧಾರೆಗಳನ್ನು ಎಲ್ಲೆಡೆ ಪಸರಿಸುವುದರಿಂದ ಸಮಾಜಕ್ಕೆ ಶಕ್ತಿ ಬರಲಿದೆ ಎಂದರು.

Also Read  ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ

ಸರಕಾರಿ ಅಧಿಕಾರಿಗಳು ಕಷ್ಟದಲ್ಲಿರುವವರಿಗೆ ಮತ್ತು ದುರ್ಬಲರಿಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಮೂಲಕ ನೆಮ್ಮದಿಯ ಸಮಾಜ ನಿರ್ಮಾಣ ಸಾಧ್ಯ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ ‘ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ’ ಭಾವಚಿತ್ರವನ್ನು ಅಳವಡಿಸಿಕೊಳ್ಳುವ ಮೂಲಕ ರಾಜ್ಯ ಸರಕಾರವು ಅವರಿಗೆ ಉನ್ನತ ಗೌರವ ನೀಡಿದೆ ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಮುಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ರಾಜು ಕೆ,  ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ವಂದಿಸಿದರು.

Also Read  ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ

error: Content is protected !!
Scroll to Top