(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 19. ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ತೊಡಗಿದ್ದ ಪೊಲೀಸರ ವಾಹನವನ್ನು ಬಳಸಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಖಾಲಿ ವಾಃನವನ್ನು ಗಮನಿಸಿ ಮೊಯಿನ್ ಖಾನ್ ಎಂಬಾತ ಪೊಲೀಸ್ ವಾಹನ ಬಳಸಿ ರೀಲ್ಸ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ವ್ಯಕ್ತಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.