ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 19. ನಾಲ್ಕು ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತನನ್ನು ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್‌ ಶರೀಫ್‌ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳಿಂದ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಆತನನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕ ಸಂತೋಷ್‌ ಬಿ.ಪಿ., ಸಿಬಂದಿಗಳಾದ ಪ್ರವೀಣ್‌ ಹಾಗೂ ಸಂತೋಷ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಮಾನ್ಸೂನ್ ನಿರೀಕ್ಷೆಯಲ್ಲಿದ್ದ ಕಾರಾವಳಿ ತೀರದ ಜನರಿಗೆ ಕಾಡುತ್ತಿದೆ ಚಂಡಮಾರುತ ಭೀತಿ

error: Content is protected !!
Scroll to Top