ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com ಚಾರ್ಮಾಡಿ, ಫೆ. 19. ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 20 ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಸೋಮವಾರದಂದು ನಡೆದಿದೆ.

ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಳೆಗೆ ಬಿದ್ದಿದೆನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು

error: Content is protected !!
Scroll to Top