ಏರ್ಪೋರ್ಟ್ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 45,44,600 ರೂಪಾಯಿ ಮೌಲ್ಯದ 733 ಗ್ರಾಂ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಕುರಿತು ವರದಿಯಾಗಿದೆ.

ಇಮಿಗ್ರೇಷನ್ ಆಗಮನದ ಪ್ರದೇಶದಲ್ಲಿನ ವಾಶ್‌ರೂಮ್‌ನ ಡ್ರೈನೇಜ್ ಚೇಂಬರ್‌ನಲ್ಲಿ ಕಪ್ಪು ಬಣ್ಣದ ಚೀಲದೊಳಗೆ ಬಚ್ಚಿಟ್ಟಿದ್ದ ಪೇಸ್ಟ್ ರೂಪದಲ್ಲಿರುವ ಚಿನ್ನ ಕಂಡುಬಂದಿದ್ದು, ವಿಮಾನ ನಿಲ್ದಾಣ ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಾಯ್ಲೆಟ್ ನಲ್ಲಿ ಚಿನ್ನವಿಟ್ಟ ವ್ಯಕ್ತಿ ಇನ್ನು ಪತ್ತೆಯಾಗಿಲ್ಲ ಎಂದು ತಿಳಿದಿದ್ದು,  ಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಣೆ ಮಾಡಿದ ಚಿನ್ನದ ಮೂಲ ಮತ್ತು ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Also Read  ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ

error: Content is protected !!