ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆಯಲಿರುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ನ್ನು ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸ್ ಇನ್‌ಸ್ಟೆಕ್ಟರ್ ನೋಟಿಸ್ ನೀಡಿದ್ದಾರೆ.

ಕಾರ್ಡ್‌ ಬೋರ್ಡ್‌ನಿಂದ ನಿರ್ಮಿಸಲಾದ 6 ಅಡಿ ಉದ್ದದ ಟಿಪ್ಪು ಸುಲ್ತಾನ್ ಕಟೌಟನ್ನು ಅನುಮತಿಯಿಲ್ಲದೇ ಅಳವಡಿಸಲಾಗಿದ್ದು, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

Also Read  ಕಡಬದಲ್ಲಿಂದು SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ ರಕ್ತದಾನ ಶಿಬಿರ ➤ 50 ಕ್ಕೂ ಅಧಿಕ ರಕ್ತದಾನಿಗಳಿಂದ ರಕ್ತದಾನ

error: Content is protected !!
Scroll to Top