ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವ ಬಗ್ಗೆ ಶಾಸಕರೇ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

Also Read  5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ➤ ಮಾ. 27ರಿಂದ ಪರೀಕ್ಷೆ ನಡೆಸಲು ಸೂಚನೆ

error: Content is protected !!
Scroll to Top