ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಗಮಿಸಿತು. ದಲಿತ ಸಂಘರ್ಷ ಸಮಿತಿ ಸದಸ್ಯರು, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿವರ್ಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ದಲಿತ ಸಂಘರ್ಷ ಸಮಿತಿ ಸದಸ್ಯರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹಾರಾರ್ಪಣೆ ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರ ನಾಯಕರ ವೇಷ ಭೂಷಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಕಳಂಜ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಗಮಿಸಿತು. ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹಾರಾರ್ಪಣೆ ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರ ನಾಯಕರ ವೇಷಭೂಷಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುರುಳ್ಯ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 11.15 ಗಂಟೆಗೆ ಆಗಮಿಸಿತು. ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

Also Read  ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ

ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಕೊಂಬಾರು ಗ್ರಾಮ ಪಂಚಾಯತ್ ನ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಳ್ಮಡ್ಕಗೆ ಸೋಮವಾರ ಬೆಳಿಗ್ಗೆ ಆಗಮಿಸಿತು. ಬ್ಯಾಂಡ್ ಸೆಟ್, ಚೆಂಡೆ ಹಾಗೂ ವಿವಿಧ ಶಾಲಾ ವಿಧ್ಯಾರ್ಥಿಗಳಿಂದ ಕೊಂಬಾರು ಗ್ರಾಮ ಪಂಚಾಯತ್‍ಗೆ ಕಾಲ್ನಡಿಗೆ ಜಾಥಾ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕಡ್ಯ ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಬಳಿಗೆ ಸೋಮವಾರ ಮಧ್ಯಾಹ್ನ ಆಗಮಿಸಿತು. ಬ್ಯಾಂಡ್ ಸೆಟ್, ಹಾಗೂ ವಿವಿಧ ಶಾಲಾ ವಿಧ್ಯಾರ್ಥಿಗಳಿಂದ ಕೊಂಬಾರು ಗ್ರಾಮ ಪಂಚಾಯತ್ ಗೆ ಕಾಲ್ನಡಿಗೆ ಜಾಥಾ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಎಡಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಡ ಶಾಲೆಯ ಬಳಿ ಸೋಮವಾರ ಮಧ್ಯಾಹ್ನ 1.15 ಗಂಟೆಗೆ ಆಗಮಿಸಿತು. ಬ್ಯಾಂಡ್ ಸೆಟ್, ಸ್ಕೌಟ್ ಗೈಡ್ ವಿಧ್ಯಾರ್ಥಿಗಳು ಹಾಗೂ ವಿವಿಧ ಶಾಲಾ ವಿಧ್ಯಾರ್ಥಿಗಳಿಂದ ಎಡಮಂಗಲ ಗ್ರಾಮ ಪಂಚಾಯತ್‍ಗೆ ಕಾಲ್ನಡಿಗೆ ಜಾಥಾ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

Also Read  ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ

ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!
Scroll to Top