ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ,  ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ವಯೋಮಿತಿ ಶೈಕ್ಷಣಿಕ ಅರ್ಹತೆ ಮತ್ತಿತರ ಮಾಹಿತಿಗಳನ್ನು ಆರ್ಮಿ ವೆಬ್‍ಸೈಟ್‍ನಲ್ಲಿ ಫೆಬ್ರವರಿ 12ರಂದು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‍ಸೈಟ್ joinindianarmy.nic.in ನಲ್ಲಿ ಮಾರ್ಚ್ 22ರೊಳಗೆ ಹೆಸರು ನೋಂದಣಿ ಮಾಡಬೇಕು. ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಗೆ ಕಳುಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Also Read  52 ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

error: Content is protected !!
Scroll to Top