ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 20. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ತಡೆಯುವುದಕ್ಕಾಗಿ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು, ಶಾಲಾ ತರಗತಿ ಕೊಠಡಿಗಳಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸಲು, ಮೊಬೈಲ್ ಫೋನ್‌ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಈ ಕುರಿತಾದ ವಿಡಿಯೋ ವೈರಲ್‌ ಆಗಿದೆ.

ಈ ಕುರಿತಾದ ವಿಡಿಯೋ ಸಂದೇಶವೊಂದನ್ನು ಯುಕೆ ಪ್ರಧಾನಿ ರಿಷಿ ಸುನಕ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿರಾಮದ ಸಮಯ ಸೇರಿದಂತೆ ಇಂಗ್ಲೆಂಡ್‌ ನಾದ್ಯಂತ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲು ಸೋಮವಾರದಂದು ಸರ್ಕಾರವು ಹೊಸ ಮಾರ್ಗದರ್ಶನವನ್ನು ಪ್ರಕಟಿಸಿದೆ.

Also Read  ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ - ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

error: Content is protected !!
Scroll to Top