ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ.

ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್​​ಗಳನ್ನು ನಿರ್ಮಿಸಿದೆ. ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Also Read  ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ

error: Content is protected !!
Scroll to Top