ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

Also Read  ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ

error: Content is protected !!
Scroll to Top