KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)

Also Read  ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ 18 ವಿದ್ಯಾರ್ಥಿಗಳು ಡಿಬಾರ್- ಪರೀಕ್ಷೆಗೆ ಮಾತ್ರ ಅವಕಾಶ

ಪ್ರಥಮ ದರ್ಜೆ ಲೆಕ್ಕ ಸಹಾಯಕರು- ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

ಪಿಂಚಣಿ ಸೌಲಭ್ಯಸರ್ಕಾರದ ಆದೇಶ ಸಂಖ್ಯೆ: ಎಫ್ ಡಿ (ಎಸ್ ಪಿಎಲ್) 4 ಪಿಇಟಿ 2005, ದಿನಾಂಕ: 31.3.2006 ರಂತೆ.

ವಯೋಮಿತಿಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷ

 

error: Content is protected !!
Scroll to Top