ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ.

ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್ ಎಂಬವರನ್ನು ವಶಕ್ಕೆ ಪಡೆದು ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:17/2024 ಕಲಂ:25(1B) (b) ARMS Act ನಂತೆ ಪ್ರಕರಣ ದಾಖಲಿಸಲಾಗಿದೆ.

Also Read  ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

error: Content is protected !!
Scroll to Top