ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.

Also Read  ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

ಹೆಚ್ಚಿನ ಮಾಹಿತಿಗೆ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.

error: Content is protected !!
Scroll to Top