(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಮಂಡೆಕೋಲು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮಕ್ಕೆ ಮಂಗಳವಾರದಂದು ಆಗಮಿಸಿದೆ. ಗ್ರಾಮದ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖಾಧಿಕಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ನೋಡೆಲ್ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು, ವಿವಿಧ ಸಂಘಟನೆಯ ಮುಖಂಡರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಗೆ ಮಂಗಳವಾರ ಆಗಮಿಸಿತು. ಬ್ಯಾಂಡ್ ಸೆಟ್ ಮೂಲಕ, ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಗೋಳಿಯಡ್ಕ ಜಂಕ್ಷನ್‍ನಿಂದ ಗ್ರಾಮ ಪಂಚಾಯತ್‍ಗೆ ಕಾಲ್ನಡಿಗೆ ಜಾಥಾ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಗೋಳಿತೊಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಗೋಳಿತೊಟ್ಟು ಗ್ರಾಮ ಪಂಚಾಯತ್‍ಗೆ ಮಂಗಳವಾರ ಸಂಜೆ ಆಗಮಿಸಿತು. ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.