ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 21. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ  ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ನಾರಿಮನ್​ ಅವರು ಕರ್ನಾಟಕ  ಪರ ವಾದ ಮಂಡಿಸಿದ್ದರು.

ಎಸ್. ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದು, ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಎಸ್. ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿದ್ದು, 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.

Also Read  ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

error: Content is protected !!
Scroll to Top