ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 21. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.

ಉಚ್ಚಿಲ ಬಟಪ್ಪಾಡಿಯಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರ್ನಾಟಕದ "ಈ" ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ

error: Content is protected !!
Scroll to Top