(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ರಾಜ್ಯ ಸರ್ಕಾರವು ಒಂದಲ್ಲೊಂದು ಎಡವಟ್ಟು ಮಾಡುತ್ತಲೇ ಇದ್ದು, ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ಇನ್ನು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಿಲ್ಲ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ನಮಗೆ ಎಲ್ಲಾ ಶಾಲೆಗಳು ಒಂದೇ. ಪ್ರಿಂಟಿಂಗ್ ಮಿಸ್ಟೇಕ್ ಆಗಿದೆ. ಅದನ್ನು ಸರಿಪಡಿಸುತ್ತೇವೆ ಎಂಬ ಉತ್ತರ ನೀಡಿದ್ದಾರೆ. ನಾವು ಆ ರೀತಿಯ ಯಾವುದೇ ಕಾನೂನು ಮಾಡಿಲ್ಲ. ಆ ರೀತಿಯ ಸುತ್ತೋಲೆ ಬಂದಿದ್ದರೆ ತಕ್ಷಣವೇ ಅದನ್ನು ಸರಿಪಡಿಸುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.