ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ, 21. ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು.

ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷರಾದ ಅನ್ವರ್ ಸಾದಾತ್ ತಮ್ಮ ಭಾಷಣದಲ್ಲಿ ಹೇಳಿದರು. ಕೆಲವೊಂದು ರಾಜಕೀಯ ಪಕ್ಷಗಳ ಸ್ವ-ಹಿತಾಸಕ್ತಿ ಧೋರಣೆಯಿಂದ ಬೇಸತ್ತು ದಲಿತರು, ಕ್ರಿಶ್ಚಿಯನ್ನರೂ ಕೂಡ ಕಳೆದ ಎರಡು ವರ್ಷಗಳಿಂದ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದತ್ತ ಮುಖ ಮಾಡುತ್ತಿದ್ದಾರೆ, ಇದು ಉತ್ತಮ ಬೆಳವಣಿಗೆ ಎಂದು ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲೆ  ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಅಭಿಪ್ರಾಯಪಟ್ಟರು.

Also Read  ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ

ಸಮಾವೇಶದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ಕೆನರಾ ವಹಿಸಿದ್ದರು. ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಪಕ್ಷದ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೆರವೇರಿಸಿದರು. ವೇದಿಕೆಯಲ್ಲಿ ವಿಕ್ಟರ್ ಎಸ್‌ಡಿಪಿಐ ದ.ಕ ಜಿಲ್ಲಾ ಉಪಾಧ್ಯಕ್ಷ ಮಾರ್ಟಿಸ್, ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರುಗಳಾದ ಬಾಬು ಎನ್ ಸವಣೂರು, ಅಬ್ದುಲ್ ಕಲಾಂ ಸುಳ್ಯ, ಕಾರ್ಯದರ್ಶಿ ಶರೀಫ್ ನಿಂತಿಕಲ್, ಕೋಶಾಧಿಕಾರಿ

ಅಬ್ದುಲ್ ರಹಮಾನ್ ತಂಬಿನಮಕ್ಕಿ, ಮುಖಂಡರುಗಳಾದ ರಮ್ಲಾನ್ ಸನ್‌ ರೈಸ್ ಕಡಬ, ಮಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ‌ ಮಲ್ಲೂರು, ಸವಣೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ರಫೀಕ್ ಎಂ.ಎ, ಸಬೀನ, ಮಾಜಿ ಸದಸ್ಯರಾದ ಮೀನಾಕ್ಷಿ, ಕೊಯಿಲ ಗ್ರಾಮ ಪಂಚಾಯತಿ ಸದಸ್ಯ ಸಬಿಯಾ, ರಾಮಕುಂಜ ಗ್ರಾಮ ಪಂಚಾಯತಿ ಸದಸ್ಯ ಚೆನ್ನು, ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯ ನಸೀಮಾ ಹಾರಿಸ್, ವಿಧಾನಸಭಾ ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಅಶ್ರಫ್ ಟರ್ಲಿ ಉಪಸ್ಥಿತರಿದ್ದರು. ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ನಿರೂಪಿಸಿದರು. ಕಾರ್ಯದರ್ಶಿ ಶರೀಫ್ ನಿಂತಿಕಲ್ಲು ವಂದಿಸಿದರು. ಕಾರ್ಯಕ್ರಮದಲ್ಲಿ ಪಕ್ಷ ಸಂಘಟನೆಯ ಕುರಿತು ಮುಖಂಡರು ಮತ್ತು ಕಾರ್ಯಕರ್ತರ ಸಮಾಲೋಚನೆ ಪಕ್ಷದಿಂದ ನಡೆದ ಕಾರ್ಯ ಚಟುವಟಿಕೆಗಳ ಮತ್ತು  ಯೋಜನೆಗಳ ಕುರಿತ ಕಿರು ಚಿತ್ರ ಪ್ರಸಾರ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ನೂರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.

Also Read  ಎಣ್ಮೂರು :ಕೆಮ್ಮಲೆ (ಹೇಮಳ) ನಾಗಬ್ರಹ್ಮ ದೇವಸ್ಥಾನಕ್ಕೆ ಸರಕಾರದಿಂದ 45 ಲಕ್ಷ ಬಿಡುಗಡೆ

error: Content is protected !!
Scroll to Top