ತನಗೆ ಸಿಕ್ಕ ಸ್ಕೂಟರ್ ನ್ನು ದಾನ ಮಾಡಿ ಕೊಟ್ಟ ಮಾತಿನಂತೆ ನಡೆದ ಡ್ರೋನ್‌ ಪ್ರತಾಪ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಬಿಗ್​ಬಾಸ್ ಕನ್ನಡ ಸೀಸನ್‌ 10ರಲ್ಲಿ ರನ್ನರ್ ಅಪ್ ಆಗಿರುವ ಡ್ರೋನ್ ಪ್ರತಾಪ್, ಗ್ರಾಂಡ್‌ ಫಿನಾಲೆ ದಿನ ​ ವೇದಿಕೆಯಲ್ಲಿ ಹೇಳಿದ್ದ ಮಾತಿನಂತೆ ನಡೆದುಕೊಂಡಿದ್ದು, ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಪ್ರತಾಪ್, ಈ ಬಿಗ್‌ ಬಾಸ್‌ ನಲ್ಲಿ ಗೆದ್ದ ಹಣದಲ್ಲಿ ಒಂದು ರೂಪಾಯಿ ಕೂಡ ನನಗೆ ಬೇಡ, ಗೆದ್ದರೆ ಬರುವ ಹಣ ಮತ್ತು ವಸ್ತುಗಳನ್ನು ಅಗತ್ಯ ಇರುವವರಿಗೆ ನೀಡುವುದಾಗಿ ಹೇಳಿದ್ದರು. ಇದೀಗ ಬಿಗ್​ಬಾಸ್ ವೇದಿಕೆಯಲ್ಲಿ ಹೇಳಿದ ಮಾತಿನಂತೆ ಡ್ರೋನ್‌ ಪ್ರತಾಪ್‌ ನಡೆದುಕೊಂಡಿದ್ದಾರೆ.

ಪ್ರತಾಪ್, ಈ ಬಾರಿಯ ಬಿಗ್‌ಬಾಸ್‌ನಲ್ಲಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದರು. ಈ ವೇಳೆ ಅವರಿಗೆ 10 ಲಕ್ಷ ಬಹುಮಾನದ ಮೊತ್ತ ಹಾಗೂ ಒಂದು ಎಲೆಕ್ಟ್ರಿಕ್ ಬೈಕ್ ನ್ನು ಉಡುಗೊರೆಯಾಗಿ ನೀಡಲಾಗಿತ್ತು. ಅದರಲ್ಲಿ ಎಲೆಕ್ಟ್ರಿಕ್ ಬೈಕ್ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಪ್ರತಾಪ್ ಬೈಕ್‌ ಯುವಕನಿಗೆ ನೀಡಿರುವ ಫೋಟೋ ವೈರಲ್‌ ಆಗುತ್ತಿದೆ. ಈ ಬಗ್ಗೆ ಸ್ವತಃ ಡ್ರೋನ್‌ ಪ್ರತಾಪ್ ಅವರು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ‘ಬಿಗ್‌ಬಾಸ್ ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ. ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆಯವರೆಗೂ ಹೋಟೆಲ್‌ ನಲ್ಲಿ ಕೆಲಸ ಮಾಡಿ‌ ಸಂಜೆಯ ಬಳಿಕ ಫುಡ್‌ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು. ಆದರೆ ಅವರ ಸ್ನೇಹಿತ ಮಾಡಿದ ಮೋಸದಿಂದ ತಮ್ಮ ಬೈಕನ್ನು ಬ್ಯಾಂಕ್‌ನವರು ಸೀಜ್‌ ಮಾಡಿದರು. ಹಾಗಾಗಿ ಇವರಿಗೆ ನನಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್‌ ಗಾಡಿಯನ್ನು ಈ ಹುಡುಗನಿಗೆ ನೀಡಿರುವುದು ನನಗೆ ತುಂಬಾ ಖುಷಿ ತಂದಿದೆ’ ಎಂದು ಬರೆದುಕೊಂಡಿದ್ದಾರೆ.

Also Read  ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

error: Content is protected !!
Scroll to Top