ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

Also Read  250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

error: Content is protected !!
Scroll to Top