ಬೆಂಗಳೂರಲ್ಲಿ ಫೆ. 26, 27ರಂದು ಬೃಹತ್ ಉದ್ಯೋಗ ಮೇಳ- ಉಚಿತ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನವು ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ಈ ಕುರಿತು ಬುಧವಾರದಂದು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ ಎಂದು ಹೇಳಿದರು. ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್ ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಉದ್ಯೋಗ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೆಸರಾಂತ 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಅಂದಾಜು ಒಂದು ಲಕ್ಷ ಹುದ್ದೆಗಳು ನಮ್ಮ ಬಳಿ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Also Read  ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್

ಉಚಿತ ಬಸ್ ವ್ಯವಸ್ಥೆ

ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗು
ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಉದ್ಯೋಗ ಮೇಳಕ್ಕಾಗಿ ವಿಶೇಷ ಬಸ್‍ಗಳು ಬರಲಿವೆ. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿದೇರ್ಶಕಿ ಎಂ.ಕನಗವಳ್ಳಿ ಉಪಸ್ಥಿತರಿದ್ದರು.

Also Read  ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

error: Content is protected !!
Scroll to Top