ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 7ರ ವರೆಗೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಗರದ ಐಓನ್ ಡಿಜಿಟಲ್ ಝೋನ್, ಬೋಂದೆಲ್ ನಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು, ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಬ್ಲೂಟೂತ್ ಹಾಗೂ ಪೇಜ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

error: Content is protected !!

Join the Group

Join WhatsApp Group