ನ್ಯುಮೋನಿಯಾ ಜ್ವರಕ್ಕೆ ತುತ್ತಾಗಿ ಬಾಲಕಿ ನಿಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ. 22. ನ್ಯುಮೋನಿಯಾಕ್ಕೆ ಜ್ವರದಿಂದಾಗಿ ಒಂದನೇ ತರಗತಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅಶ್ರಿಜಾ ಎಂದು ಗುರುತಿಸಲಾಗಿದೆ. ಬಾಲಕಿ ನ್ಯುಮೋನಿಯಾ ಜ್ವರಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾಳೆ. ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.

error: Content is protected !!
Scroll to Top