ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗೆ ಸಚಿವ ಗಡ್ಕರಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗಳ ಸಹಿತ 13 ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಮಾಡಲಿದ್ದಾರೆ.

ಸಚಿವ ನಿತಿನ್ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ- ಧರ್ಮಸ್ಥಳ-ಪೆರಿಯಶಾಂತಿ ವರೆಗಿನ 614 ಕೋಟಿ ರೂ. ವೆಚ್ಚದ ಸುಮಾರು 28.50 ಕಿ.ಮೀ. ಉದ್ದದ ದ್ವಿಪಥ ರಸ್ತೆ ಹಾಗೂ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ 344 ಕೋಟಿ ರೂ. ವೆಚ್ಚದ ಸುಮಾರು 11 ಕಿ.ಮೀ ದ್ವಿಪಥ ರಸ್ತೆ ಕಾಮಗಾರಿಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Also Read  ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

error: Content is protected !!
Scroll to Top