ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು!

(ನ್ಯೂಸ್ ಕಡಬ) newskadaba.com ಚಂಡೀಗಢ, ಫೆ. 22. ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಮೃತಪಟ್ಟಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ.

ಮೃತ ರೈತನನ್ನು 23 ವರ್ಷದ ಶುಭಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆತರುತ್ತಿದ್ದ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದು, ಮೃತ ರೈತನಿಗೆ ಗುಂಡು ತಗುಲಿದೆ ಎಂದು ಪಟಿಯಾಲ ಆಸ್ಪತ್ರೆಯ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

Also Read  ಕರ್ನಾಟಕಕ್ಕೆ ನಿರಾಸೆ, ಫೈನಲ್‌ಗೆ ಸೌರಾಷ್ಟ್ರ!

error: Content is protected !!
Scroll to Top