ರಾಜ್ಯದ ಆರೂವರೆ ಕೋಟಿ ಜನರು ನನ್ನ ಆಸ್ತಿಯಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ► ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಸಮೀಕ್ಷೆಗೆ ಪ್ರತ್ಯುತ್ತರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ನಾನು ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿಯಾಗಿದ್ದು, 13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದೇನೆ ಎಂದು ಸಮೀಕ್ಷೆಯೊಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮದು ಅವಿಭಕ್ತ ಕುಟುಂಬವಾಗಿದ್ದು, ಒಟ್ಟು ಆಸ್ತಿಯ ಲೆಕ್ಕ ಇದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ಅಣ್ಣ ತಮ್ಮಂದಿರ ಎಲ್ಲ ಆಸ್ತಿಯ ವಿವರವನ್ನೂ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗಿತ್ತು. ಅಣ್ಣನ ನಿಧನದ ಬಳಿಕ ನಾನೇ ಮನೆಯ ಯಜಮಾನನಾಗಿದ್ದು, ಈಗ ಕುಟುಂಬದ ಆಸ್ತಿಯನ್ನು ವಿಭಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ನಡುವೆ ಕರ್ನಾಟಕದ ಆರೂವರೆ ಕೋಟಿ ಜನರು ಕೂಡ ನನ್ನ ಆಸ್ತಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Also Read  ವಿಆರ್.ಎಲ್ ಲಾಜಿಸ್ಟಿಕ್ ಸಂಸ್ಥೆಯ ವತಿಯಿಂದ ಧರ್ಮಸ್ಥಳಕ್ಕೆ ಎರಡು ಡಬಲ್ ಡೆಕ್ಕರ್ ಬಸ್

error: Content is protected !!
Scroll to Top