(ನ್ಯೂಸ್ ಕಡಬ) newskadaba.com ಕಾರವಾರ, ಫೆ. 22. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಏರಿಕೆಯ ಪ್ರಮಾಣ ಹೆಚ್ಚುತ್ತಲೇ ಇದ್ದು, ಇದೀಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಮೃತ್ಯು ಪ್ರಕರಣ ದಾಖಲಾಗಿದೆ.
ಮಂಗನ ಕಾಯಿಲೆಯಿಂದಾಗಿ ಸಿದ್ದಾಪುರದ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಜಿಲೆಯಲ್ಲಿ ಇದುವರೆಗೆ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳು ಸಿದ್ಧಾಪುರ ತಾಲೂಕಿನದ್ದು ಎಂಬುದು ಆಘಾತಕಾರಿ ಸಂಗತಿಯಾಗಿದೆ. ಜನವರಿ ಕೊನೆಯ ವಾರ ಹಾಗೂ ಫೆಬ್ರವರಿ ಮೊದಲ ವಾರದ ಮಧ್ಯೆ ಸುಮಾರು 37 ಮಂದಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಇವರಲ್ಲಿ 6 ಮಂದಿ ತಾಲೂಕು ಆಸ್ಪತ್ರೆಯಲ್ಲಿ ಹಾಗೂ 6 ಮಂದಿಯನ್ನು ಮಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.