ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ರೈಲ್ವೇ ಮಂಡಳಿಯು ಹೊರಡಿಸಿರುವ
ಆದೇಶದ ಪ್ರಕಾರ ತಿರುವನಂತರಪುರ – ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು (ನಂ. 20632/20631)  ಮಂಗಳೂರಿನವರೆಗೆ ವಿಸ್ತರಿಸಲಾಗಿದ್ದು, ಇನ್ನು ಮುಂದೆ ಈ ರೈಲು ತಿರುವನಂತಪುರಂ- ಮಂಗಳೂರು ನಡುವೆ ಸಂಚರಿಸಲಿದೆ.

ರೈಲ್ವೇ ಇಲಾಖೆಯ ಹೊಸ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 6-15ಕ್ಕೆ ಹೊರಟು ಅಪರಾಹ್ನ 3-05 ಕ್ಕೆ ತಿರುವನಂತಪುರಂ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4-05ಕ್ಕೆ ಹೊರಟು ರಾತ್ರಿ 12-40ಕ್ಕೆ ಮಂಗಳೂರಿಗೆ ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

error: Content is protected !!
Scroll to Top